ಇರಾನ್ ಮೇಲೆ ನಡೆಯುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಇಸ್ರೇಲ್ ಕೂಡ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂಬ ಮಾಹಿತಿ ಅಮೆರಿಕ ಹಾಗೂ ಇಸ್ರೇಲ್ ಮಾಧ್ಯಮ ವರದಿಗಳಲ್ಲಿ ಪ್ರಕಟವಾಗಿದೆ.
ಶ್ವೇತಭವನದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಈ ಬಗ್ಗೆ CNN ವರದಿ ಮಾಡಿದೆ. ಇಸ್ರೇಲ್ ನ ಸರಕಾರಿ ಮಾಧ್ಯಮ ‘ಕಾನ್’ ಕೂಡ ಇಸ್ರೇಲ್ ಕದನ ವಿರಾಮಕ್ಕೆ ಸಮ್ಮತಿಸಿದೆ ಎಂದು ತಿಳಿಸಿದೆ.














