ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್ 15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

ಶ್ರೀ ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಡಾ. ಬಾಲಗಂಗಾಧರನಾಥ ಶ್ರೀಗಳ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಏಪ್ರಿಲ್ 15ರಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ದೇವಾಲಯ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ಶ್ರೀ ಕ್ಷೇತ್ರದಲ್ಲಿ ಡಾ. ಬಾಲಗಂಗಾಧರನಾಥ ಶ್ರೀಗಳ ಮೂಲ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾದ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಏಪ್ರಿಲ್ 10 ರಿಂದ 15 ರವರೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.

Leave a Reply

Your email address will not be published. Required fields are marked *

Join WhatsApp Group
error: Content is protected !!