ಬೆಳ್ತಂಗಡಿ: ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ದುರ್ಘಟನೆ ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು ಪ್ರದೇಶದಲ್ಲಿ ಏಪ್ರಿಲ್ 7ರಂದು ನಡೆದಿದೆ.
ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ನಿಯಂತ್ರಣ ತಪ್ಪಿದ ಕ್ರೇನ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ಪರಿಣಾಮವಾಗಿ ಪಾದಚಾರಿಗೆ ಗಂಭೀರ ಗಾಯಗಳಾಗಿ, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದು ಬೆಳ್ತಂಗಡಿ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.














