ರಾಜ್ಯದಲ್ಲಿ ಆಟೋ ಗ್ಯಾಸ್ (LPG) ಅಭಾವ ಉಂಟಾಗಿದೆ ಎಂಬ ವದಂತಿಗಳು ಹಬ್ಬುತ್ತಿರುವುದಕ್ಕೆ ಸಂಬಂಧಿಸಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ ನೀಡಿದ್ದು, ಸಾರ್ವಜನಿಕರು ಹಾಗೂ ಆಟೋ ಚಾಲಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.
ಕೆಲವು ಖಾಸಗಿ ಆಟೋ ಗ್ಯಾಸ್ ಸರಬರಾಜು ಸಂಸ್ಥೆಗಳಲ್ಲಿ ಕಂಡುಬಂದಿದ್ದ ಕೊರತೆಯನ್ನು ಸರಿಪಡಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹೆಚ್ಚಿನ ಪ್ರಮಾಣದ ಗ್ಯಾಸ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿವೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಸರ್ಕಾರದ ಸ್ಪಷ್ಟನೆ
ಹೆಚ್ಚುವರಿ ಪೂರೈಕೆ: ಈ ಮೊದಲು ಸರಬರಾಜು ಮಾಡಲಾಗುತ್ತಿದ್ದ 56.67 ಮೆಟ್ರಿಕ್ ಟನ್ ಆಟೋ ಗ್ಯಾಸ್ ಪ್ರಮಾಣವನ್ನು ಇದೀಗ 83.58 ಮೆಟ್ರಿಕ್ ಟನ್ಗೆ ಏರಿಸಲಾಗಿದೆ.
ತೈಲ ಕಂಪನಿಗಳ ಸಹಕಾರ: ಕೇಂದ್ರ ಸರ್ಕಾರದ ಅಧೀನದ IOC (ಇಂಡಿಯನ್ ಆಯಿಲ್), BPC (ಭಾರತ್ ಪೆಟ್ರೋಲಿಯಂ) ಮತ್ತು HPC (ಹಿಂದೂಸ್ತಾನ್ ಪೆಟ್ರೋಲಿಯಂ) ಕಂಪನಿಗಳು ಕಳೆದ ಐದು ದಿನಗಳಿಂದ ನಿರಂತರವಾಗಿ ಹೆಚ್ಚಿನ ಪ್ರಮಾಣದ ಗ್ಯಾಸ್ ಪೂರೈಸುತ್ತಿವೆ.
ವದಂತಿಗಳಿಗೆ ಕಿವಿಗೊಡಬೇಡಿ: ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಆಟೋ ಗ್ಯಾಸ್ ಅಭಾವದ ಕುರಿತಾದ ತಪ್ಪು ಮಾಹಿತಿಯನ್ನು ನಂಬಿ ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುವ ಅವಶ್ಯಕತೆಯಿಲ್ಲ ಎಂದು ಸರ್ಕಾರ ಮನವಿ ಮಾಡಿದೆ.














