ಪುತ್ತೂರು, ಏ.9: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನುಮಗಿರಿಯ ಶ್ರೀ ಕೋದಂಡರಾಮ–ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಾಕ್ಷಿಯಾಗಲಿದ್ದಾರೆ.
ಏಪ್ರಿಲ್ 9ರಿಂದ 12ರವರೆಗೆ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಜರುಗಲಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 10ರಂದು ರಾಜ್ಯಪಾಲರು ಕ್ಷೇತ್ರಕ್ಕೆ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ದೇವಸ್ಥಾನ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

Join WhatsApp Group
error: Content is protected !!