ಮಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಏಪ್ರಿಲ್ 10ರಿಂದ 12ರವರೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ವಾತಾವರಣದಲ್ಲಿನ ಬದಲಾವಣೆಯಿಂದ ಉಷ್ಣಾಂಶ ಏರಿಕೆಯಾಗುತ್ತಿರುವುದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಐಎಂಡಿ ಸೂಚಿಸಿದೆ. ಅಗತ್ಯವಿದ್ದಲ್ಲಿ ಮಾತ್ರ ಹೊರಗಡೆ ತೆರಳುವುದು, ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸುವುದು ಸೇರಿದಂತೆ ಎಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ













