ಕಡಬ: ರಸ್ತೆ ಕಾಮಗಾರಿ ವಿಚಾರದಲ್ಲಿ ಮಹಿಳೆಗೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ನಾಲ್ವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ಕುಟ್ರುಪ್ಪಾಡಿ ನಿವಾಸಿ ಮೋನಮ್ಮ (55) ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಅವರು ಪರಿಶಿಷ್ಟ ಜಾತಿ/ಪಂಗಡಕ್ಕೆ ಸೇರಿದವರಾಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದಾರೆ.
ದೂರು ಪ್ರಕಾರ, ಏಪ್ರಿಲ್ 8ರಂದು ಅವರು ಕೆಲಸ ಮಾಡುತ್ತಿದ್ದ ಮನೆಯ ಬಳಿ ಜೆಸಿಬಿ ಮೂಲಕ ರಸ್ತೆ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿಯಿಂದ ರಸ್ತೆಗೆ ಹಾನಿಯಾಗುತ್ತಿರುವುದನ್ನು ಗಮನಿಸಿ, ಸ್ಥಳಕ್ಕೆ ತೆರಳಿ ಜಾಗದ ಮಾಲಿಕರ ಸಮ್ಮುಖದಲ್ಲಿ ಕೆಲಸ ನಡೆಸುವಂತೆ ತಿಳಿಸಿದ್ದರು. ಈ ವೇಳೆ ಅಲ್ಲಿದ್ದ ರುಕ್ಮಯ್ಯ, ನೊಣಯ್ಯ, ಬಾಲಕೃಷ್ಣ ಹಾಗೂ ಹರಿಪ್ರಸಾದ್ ಅವರು ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದರೆಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 44/2026ರಂತೆ ಎಸ್‌ಸಿ/ಎಸ್‌ಟಿ (ಅತ್ಯಾಚಾರ ನಿವಾರಣೆ) ತಿದ್ದುಪಡಿ ಕಾಯ್ದೆ 2015ರ ಕಲಂ 3(1)(s), 3(1)(r), 3(2)(va) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 118(1), 352, 351(2) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!