ಮಂಗಳೂರು: ತಾಲೂಕಿನ ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಮದುವೆ ಕಾರ್ಯಕ್ರಮದ ವೇಳೆ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ವಾಹನಗಳನ್ನು ಅಕ್ರಮವಾಗಿ ನಿಲ್ಲಿಸಿ ಟ್ರಾಫಿಕ್ ಜಾಮ್ ಉಂಟು ಮಾಡಿದ ಆರೋಪದಲ್ಲಿ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ ಮಾಲಿಕರು ಹಾಗೂ ಆಯೋಜಕರ ವಿರುದ್ಧ ಬಜಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಭಾನುವಾರ (ಏ.12) ಮಧ್ಯಾಹ್ನ 12ರಿಂದ 2 ಗಂಟೆಯ ನಡುವೆ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಮಾಡದೆ ಹೆದ್ದಾರಿಯ ಮೇಲೆಯೇ ವಾಹನಗಳನ್ನು ನಿಲ್ಲಿಸಲಾಗಿತ್ತು. ಇದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಗಿ ಸಾರ್ವಜನಿಕರಿಗೆ ತೊಂದರೆ ಮತ್ತು ಅಪಾಯ ಸಂಭವಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಈ ಸಂಬಂಧ ಮೊ.ನಂ 73/2026ರಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 126(2), 285, 292 ಹಾಗೂ ಐಎಂವಿ ಕಾಯ್ದೆಯ ಕಲಂ 122ರಡಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!