ವಿಟ್ಲ: ಹಳೆಯ ವೈಷಮ್ಯ ಹಿನ್ನೆಲೆ ವ್ಯಕ್ತಿಯೊಬ್ಬರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.
ಮಾಣಿ ನಿವಾಸಿ ವಿಶ್ವನಾಥ (28) ಅವರು ಏ.12ರಂದು ಸಂಜೆ ಮನೆಯಲ್ಲಿದ್ದ ವೇಳೆ, ಪರಿಚಿತನಾದ ನವೀನ್ ಎಂಬಾತ ಸುಮಾರು ಒಂದು ವರ್ಷದ ಹಿಂದೆ ನಡೆದಿದ್ದ ಗಲಾಟೆ ವಿಚಾರವಾಗಿ ತಕರಾರು ತೆಗೆದು ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಪರಿಣಾಮ ವಿಶ್ವನಾಥ ಗಾಯಗೊಂಡಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಕುರಿತು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2026ರಂತೆ ಬಿಎನ್‌ಎಸ್ 2023ರ ಕಲಂ 118(1), 109ರಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.
ಪ್ರಕರಣ ಸಂಬಂಧ ಬಂಟ್ವಾಳ ಬರಿಮಾರು ನಿವಾಸಿ ಪಿ. ನವೀನ್ (43) ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!