ಪುತ್ತೂರು: ಬೈಕ್‌ ಅಪಘಾತದಲ್ಲಿ ಯುವಕ ಸಾವು
ಪುತ್ತೂರು: ನಗರದಲ್ಲಿನ ಪಡೀಲ್ ಪ್ರದೇಶದಲ್ಲಿ ಬೈಕ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಲೈಟ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಬೆಳ್ಳಿಪ್ಪಾಡಿ ನಿವಾಸಿ ಧನರಾಜ್ (ಧನು) (21) ಎಂದು ಗುರುತಿಸಲಾಗಿದೆ.
ಧನು ಅವರು ಸ್ನೇಹಿತರೊಂದಿಗೆ ಪುತ್ತೂರು ಜಾತ್ರೆ ಗದ್ದೆಯಲ್ಲಿ ಆಹಾರ ಸ್ಟಾಲ್‌ ಹಾಕಿಕೊಂಡಿದ್ದರು. ನಿನ್ನೆ ಮುರ ಪ್ರದೇಶದ ಸ್ನೇಹಿತನ ಮನೆಯಲ್ಲಿ ತಂಗಿದ್ದ ಅವರು, ಇಂದು ಬೆಳಿಗ್ಗೆ ಬಟ್ಟೆ ಬದಲಾಯಿಸಿ ಸ್ಟಾಲ್‌ಗೆ ತೆರಳಲು ಬೈಕ್‌ನಲ್ಲಿ ಮನೆ ಕಡೆ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಬೈಕ್‌ ಮೊದಲು ಡಿವೈಡರ್‌ಗೆ, ಬಳಿಕ ಲೈಟ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದರ ಪರಿಣಾಮವಾಗಿ ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಬೈಕ್‌ಗೆ ಕೂಡ ಅಪ್ಪಳಿಸಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಧನು ಅವರಿಗೆ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.
ಮೃತದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಶವಾಗಾರದಲ್ಲಿ ಇರಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!