ಚಿತ್ರದುರ್ಗ : ನಗರದ ವಿದ್ಯಾನಗರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ನಗರ ಮತ್ತು ಮಹಿಳಾ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಇಂದು ಸಂಜೆ ಬಂಧಿಸಿದ್ದಾರೆ. ಈ ವೇಳೆ ಇಬ್ಬರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.
ಬಂಧಿತರನ್ನು ಹಸೀನಾಬಾನು ಮತ್ತು ಅಶ್ವಕ್ ಅಹಮದ್ ಎಂದು ಗುರುತಿಸಲಾಗಿದೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯ
ವಿದ್ಯಾ ನಗರದ 5 ನೇ ಕ್ರಾಸ್‌ನಲ್ಲಿರುವ ತಿಮ್ಮಮ್ಮ ರವರ ಮನೆಯಲ್ಲಿ ಬಾಡಿಗೆಗೆ ವಾಸವಿರುವ ಹಸೀನಾಬಾನು ಮತ್ತು ಅಶ್ವಕ್ ಅಹಮದ್ ಎಂಬುವರು ಅಮಾಯಕ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು ಕಾನೂನು ಬಾಹಿರವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತವಾದ ಮಾಹಿತಿ ಮೇರೆಗೆ ಈ ದಾಳಿ ಮಾಡಿದ್ದಾರೆ.
ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ ನಗರ ಮತ್ತು ಮಹಿಳಾ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ವೇಶ್ಯಾವಾಟಿಕೆಯ ಬಗ್ಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ ಕಾರ್ಯವನ್ನು ಚಿತ್ರದುರ್ಗ ಜಿಲ್ಲೆಯ ಎಸ್.ಪಿ ರಂಜಿತ್‌ಕುಮಾರ್ ಬಂಡಾರು ಶ್ಲಾಘಿಸಿದ್ದಾರೆ.














