ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಏ.16 ರಂದು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವ ಬಗ್ಗೆ ಮನೆಯವರಿಗೆ ಬಾಲಕಿ ತಿಳಿಸಿದ್ದು ಅದರಂತೆ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಏ.17 ರಂದು ದೂರು ನೀಡಿದ್ದು ಅದರಂತೆ ಪೊಲೀಸರು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡ ಪ್ರಕರಣದಲ್ಲಿ ಭಾಗಿಯಾದ ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್(28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್(26) ನನ್ನು ಏ.18 ರಂದು ಸಂಜೆ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.


ಭಾವೀ ವರ ಅಂದರ್:* ಈ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾದ ಓರ್ವ ಆರೋಪಿ ಕಡುರುದ್ಯಾವರ ಗ್ರಾಮದ ಸುಮಂತ್ ಗೆ ಮೇ.10 ರಂದು ಮದುವೆ ಕಾರ್ಯಕ್ರಮ ನಿಗದಿಯಾಗಿತ್ತು.

Leave a Reply

Your email address will not be published. Required fields are marked *

Join WhatsApp Group
error: Content is protected !!