ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹೋಂ ಸ್ಟೇ ಮಾಲೀಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ವಾಷಿಂಗ್ಟನ್ ಮೂಲದ ಮಹಿಳೆಯೊಬ್ಬರು ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ್ದರು.ಅವರು ಕುಟ್ಟ ಗ್ರಾಮದಲ್ಲಿರುವ ‘ದೇವಿ ವಿಲ್ಲಾ ಹೋಮ್ ಸ್ಟೇ’ (Devi Villa Homestay) ನಲ್ಲಿ ತಂಗಿದ್ದರು. ವರದಿಗಳ ಪ್ರಕಾರ, ಕಳೆದ ಏಪ್ರಿಲ್ 19 ರಂದು ಈ ಘಟನೆ ನಡೆದಿದೆ.
ಆರೋಪಿಗಳ ಬಂಧನ: ದೌರ್ಜನ್ಯಕ್ಕೆ ಒಳಗಾದ ಮಹಿಳೆ ನೀಡಿದ ದೂರಿನ ಮೇರೆಗೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಹೋಂ ಸ್ಟೇ ಮಾಲೀಕ ದೇವಿ ಎಂಬಾತನನ್ನು ಬಂಧಿಸಿದ್ದಾರೆ. ಇದರೊಂದಿಗೆ, ಹೋಂ ಸ್ಟೇನಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವಿಶಾಲ್ ಮತ್ತು ವೃಜೇಶ್ ಎಂಬ ಇಬ್ಬರು ವ್ಯಕ್ತಿಗಳನ್ನು ಸಹ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಬಂಧಿಸಲಾಗಿದೆ.
ಸದ್ಯ ಪೊಲೀಸರು ಬಂಧಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರವಾಸಿಗರ ಸ್ವರ್ಗ ಎಂದೇ ಕರೆಯಲ್ಪಡುವ ಕೊಡಗಿನಲ್ಲಿ ವಿದೇಶಿ ಪ್ರವಾಸಿಯ ಮೇಲೆ ಇಂತಹ ಕೃತ್ಯ ನಡೆದಿರುವುದು ಸ್ಥಳೀಯರಲ್ಲಿ ಮತ್ತು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ.














