ಪುತ್ತೂರು, ಏ.25: ಹಳೆ ಕಟ್ಟಡವನ್ನು ಭಾಗಶಃ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಕ್ತರು ಸೇರಿಕೊಂಡು ಹಳೆ ಕಟ್ಟಡವನ್ನು ತೆರವುಗೊಳಿಸಿರುವ ಕುರಿತು ಮಾಹಿತಿ ಪಡೆದ ಈಶ್ವರ ಭಟ್ ಸ್ಥಳಕ್ಕೆ ತೆರಳಿ, ಭಕ್ತರನ್ನು ಸಮಾಧಾನಪಡಿಸಿ ದೇವಸ್ಥಾನಕ್ಕೆ ಮರಳಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಳಿಕ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಕೇದಗೆ ಅರವಿಂದ ಎಂಬವರು ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆಂದು ಅವರು ಆರೋಪಿಸಿದ್ದಾರೆ.
ಈ ಸಂಬಂಧ ಪೊಲೀಸರು ಮೊದಲು ಇದನ್ನು ಅಸಂಜ್ಞೆಯ ಪ್ರಕರಣವೆಂದು ಪರಿಗಣಿಸಿ ನ್ಯಾಯಾಲಯದ ಅನುಮತಿಗಾಗಿ ಮನವಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯದ ಅನುಮತಿ ದೊರೆತ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!