ಪುತ್ತೂರು, ಏ.26: ಮಹಾಲಿಂಗೇಶ್ವರ ದೇವರ ಭಕ್ತರ ಹಿತದೃಷ್ಟಿಯಿಂದ ಕೈಗೊಂಡ ಕಾರ್ಯಕ್ಕೆ ಸಂಬಂಧಿಸಿ ಶಾಸಕ ಅಶೋಕ್ ಕುಮಾರ್ ರೈ ಹಾಗೂ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ಟರ ವಿರುದ್ಧ ದೂರು ನೀಡಿರುವವರ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಭಕ್ತರು ಧರಣಿ ನಡೆಸಲು ನಿರ್ಧರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಏಪ್ರಿಲ್ 27ರಂದು ಸಂಜೆ 5.30ಕ್ಕೆ ಪುತ್ತೂರು ಪೊಲೀಸ್ ಠಾಣೆ ಎದುರು ಮಹಾಲಿಂಗೇಶ್ವರನ ಭಕ್ತಾದಿಗಳಿಂದ ಧರಣಿ ನಡೆಯಲಿದೆ ಎಂದು ತಿಳಿದು ಬಂದಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಭಕ್ತರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.













