ಪುತ್ತೂರು: ಮುಕ್ರಂಪಾಡಿ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಏಪ್ರಿಲ್ 26ರಂದು ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ವರದಿಯಾಗಿದೆ.
ಪುತ್ತೂರಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರುಗಳ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರುಗಳಿಗೆ ಹಾನಿಯಾಗಿದೆ.
ಬೈಕ್ ಸವಾರರ ಕಾಲಿಗೆ ಗಾಯವಾಗಿದ್ದು ತಕ್ಷಣ ಅವರನ್ನು ಮೆಡಿಲ್ಯಾಂಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ವಿವರಗಳು ತಿಳಿದುಬರಬೇಕಾಗಿದೆ.














