ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದ ಶಿಕ್ಷಕಿಯೊಬ್ಬರ (Teacher)  ದುಡುಕಿನ ನಿರ್ಧಾರ ಸದ್ಯ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಗುಂಡು ಹಾರಿಸಿಕೊಂಡು ಆತ್ಮಹತ್ಯೆ(death) ಮಾಡಿಕೊಂಡಿರುವಂತಹ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.

ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಎ.ರೋಹಿಣಿ(51) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದಿದ್ದೇನು?

ಎ.ರೋಹಿಣಿ ಅವರು ಎಲ್ಲರ ಅಚ್ಚುಮೆಚ್ಚಿನ ಶಿಕ್ಷಕಿ ಆಗಿದ್ದರು. 25 ವರ್ಷ ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು ಮಕ್ಕಳಿಗೆ ದಾರಿದೀಪವಾಗಿದ್ದರು.‌ ಆದರೆ ಏನಾಯಿತೋ ಏನೋ, ಒಂಟಿ‌ ನಳಿಗೆ ಕೋವಿಯಿಂದ ತಮ್ಮ ಮನೆಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿದ್ದಾರೆ. ನಿನ್ನೆ ರಾತ್ರಿ 12 ಗಂಟೆಯವರೆಗೆ ಕೆಲಸ ಮಾಡಿ ಮಲಗಿದ್ದ ಅವರು ಮುಂಜಾನೆ 5 ಗಂಟೆ ವೇಳೆಗೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುಂಡು ಸಿಡಿದ ಶಬ್ಧ ಕೇಳುತ್ತಿದ್ದಂತೆ ಪಕ್ಕದ ಕೊಠಡಿಯಲ್ಲಿ ಮಲಗಿದ್ದ ಅವರ ಪತಿ ಕರುಂಬಯ್ಯ ಹಾಗೂ ಮಗಳು ಎದ್ದು ಹೋಗಿ ನೋಡಿದಾಗ ರೋಹಿಣಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಭಾಗಮಂಡಲ ಠಾಣೆ ಪೊಲೀಸರು ಮೃತದೇಹವನ್ನು ಕೊಡಗು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!