ಬೆಳ್ತಂಗಡಿ: ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ–ರೇವತಿ ದಂಪತಿಯ ಪುತ್ರಿ ರಮ (19) ಎಂದು ಗುರುತಿಸಲಾಗಿದೆ. ರಮ ಎ.19ರ ರಾತ್ರಿ ಮನೆಯಲ್ಲಿ ಇಲಿಪಾಷಣ ಸೇವಿಸಿದ್ದಳು. ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಎ.29ರಂದು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ರಮ ವಾಮದಪದವು ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಂಡಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎ.30ರಂದು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.














