ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ತಮ್ಮನ್ನು ಗಡೀಪಾರು ಮಾಡಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

2026ರ ಮಾರ್ಚ್ 13ರಂದು ಪುತ್ತೂರು ವಿಭಾಗಾಧಿಕಾರಿ ಮೂರನೇ ಬಾರಿಗೆ ಹೊರಡಿಸಿದ ಗಡೀಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ಪೀಠ ಗುರುವಾರ ತೀರ್ಪು ಪ್ರಕಟಿಸಿದೆ.

ನಿಯಮದ ಪ್ರಕಾರ ಅರ್ಜಿದಾರರಿಗೆ ಗಡೀಪಾರು ಆದೇಶ ಪ್ರಶ್ನಿಸಿ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಹೀಗಾಗಿ ಅರ್ಜಿಯನ್ನು ಪುರಸ್ಕರಿಸಲಾಗದು ಎಂದು ನ್ಯಾಯಾಲಯ ಹೇಳಿದೆ. ಮೇಲ್ಮನವಿ ಸಲ್ಲಿಸಬೇಕಿರುವ ಕಾರಣ ಸದ್ಯಕ್ಕೆ ಎರಡು ವಾರ ಗಡೀಪಾರು ಆದೇಶ ಸಂಬಂಧ ಅರ್ಜಿದಾರರ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!