ಕಡಬ: ಮೇ 1, 2026 ರಂದು ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂ. 17/2026 (ಕಲಂ 194 BNSS-2023) ಅಡಿಯಲ್ಲಿ ದಾಖಲಾದ ಪ್ರಕರಣವು ಇದೀಗ ಮರು ನೋಂದಣಿಯಾಗಿದೆ.
ಕಡಬ ಕಡ್ಯ ನಿವಾಸಿ ರವಿಚಂದ್ರ ಅವರು ಆರಂಭದಲ್ಲಿ ನೀಡಿದ ದೂರಿನ ಪ್ರಕಾರ, ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಯಾವುದೇ ಅನುಮಾನ ಕಾಣಿಸದ ಹಿನ್ನೆಲೆಯಲ್ಲಿ ಇದನ್ನು ಆತ್ಮಹತ್ಯೆ ಪ್ರಕರಣವೆಂದು ದಾಖಲಿಸಲಾಗಿತ್ತು. ಆದರೆ ನಂತರದ ಪರಿಶೀಲನೆಯಲ್ಲಿ ಕೆಲವು ಅನುಮಾನಾಸ್ಪದ ಅಂಶಗಳು ಬೆಳಕಿಗೆ ಬಂದಿವೆ.
ಮೃತ ಚೆನ್ನಪ್ಪ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದಿರುವ ಕೋಣೆಯ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಲಾಗಿರಲಿಲ್ಲ. ಜೊತೆಗೆ ಅವರ ಜೇಬಿನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಈ ಹಿನ್ನೆಲೆ, ಪಿರ್ಯಾದಿದಾರರು ಮೇ 3, 2026 ರಂದು ನೀಡಿದ ಮತ್ತೊಂದು ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 56/2026 (ಕಲಂ 108 BNS-2023) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.














