ಸವಣೂರು ಸಮೀಪದ ಕಾಣಿಯೂರು–ಮಂಜೇಶ್ವರ ಅಂತಾರಾಜ್ಯ ರಸ್ತೆಯ ಚಾಪಳ್ಳ ಬಳಿ ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಒಬ್ಬ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಮಿತ್ತೂರು ಮೂಲದವ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುವನ್ನು ಕಲ್ಲಡ್ಕ ಮೂಲದ ಜಗನ್ ಎಂದು ತಿಳಿದುಬಂದಿದ್ದು, ಅವರು ಸಂಪ್ಯ ಅಕ್ಷಯ ಕಾಲೇಜಿನ ವಿದ್ಯಾರ್ಥಿ ಎಂದು ಹೇಳಲಾಗಿದೆ.
ಅಪಘಾತದ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿವೆ.














