ಬಂಟ್ವಾಳ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯ ಅಪರಾಧ ಸಂಖ್ಯೆ 260/2014ರ ಕಲಂ 306 ಐಪಿಸಿ ಪ್ರಕರಣದ ಆರೋಪಿ ಕರಿಯಂಗಳ ನಿವಾಸಿ ದುನಿಯಾ ಶರೀಫ್ ಅಲಿಯಾಸ್ ಮಹಮ್ಮದ್ ಶರೀಫ್ (52) ಬಂಧಿತನಾಗಿದ್ದಾನೆ.
ಪ್ರಕರಣದ ವಿಚಾರಣೆಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯು ಮೇ 5ರಂದು ವಿದೇಶದಿಂದ ಭಾರತಕ್ಕೆ ಮರಳುತ್ತಿದ್ದ ವೇಳೆ, ಮುಂಬೈ ಸಹಾರಾ ಠಾಣೆ ಪೊಲೀಸರ ಸಹಕಾರದೊಂದಿಗೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದರು.
ಬಂಧಿತ ಆರೋಪಿಯನ್ನು ಮೇ 6ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.














