ಬೆಂಗಳೂರು: ವಿಮಾನದಲ್ಲಿ 24 ವರ್ಷದ ಏರ್‌ಹೋಸ್ಟೆಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ 63 ವರ್ಷದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ 63 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಕೇರಳ ನಿವಾಸಿ ಜಾಕೋಬ್ ಅಲೆಕ್ಸಾಂಡರ್ (63) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಈ ಘಟನೆ ಬಹ್ರೇನ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ನಡೆದಿದೆ. ಬಹ್ರೇನ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಗಲ್ಫ್ ಏರ್ (GF-280) ವಿಮಾನದಲ್ಲಿ ಮೇ 4 ರಂದು ಈ ಘಟನೆ ನಡೆದಿತ್ತು.
ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ಸಮಯದಲ್ಲಿ, ಆರೋಪಿಯು ಹೊದಿಕೆಯ (blanket) ಒಳಗಿನಿಂದ ಕೈ ಹಾಕಿ 24 ವರ್ಷದ ಗಗನಸಖಿಗೆ ಅಸಭ್ಯವಾಗಿ ಸ್ಪರ್ಶಿಸಿದ್ದ ಎನ್ನಲಾಗಿದೆ.













