ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೂ ಸೇರಿದಂತೆ ವಿವಿಧ ಕಡೆಗಳಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ವಾಹನ ಅಪಘಾತಗಳು ಹಾಗೂ ಮೃತ್ಯು ಪ್ರಕರಣಗಳ ಹಿನ್ನೆಲೆ, ಮುಂದೆ ಯಾವುದೇ ಅನಾಹುತಗಳು ಸಂಭವಿಸದಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಜಪ ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು.
ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆ ಮೇರೆಗೆ ನಡೆದ ಈ ಧಾರ್ಮಿಕ ವಿಧಿವಿಧಾನದಲ್ಲಿ ಕ್ಷೇತ್ರದ ಜನರ ಸುರಕ್ಷತೆ, ಶಾಂತಿ ಹಾಗೂ ಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಸರ್ವ ಜನರ ಒಳಿತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!