ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.
ಸುಳ್ಯದಿಂದ ಮಡಿಕೇರಿ ಕಡೆಗೆ ಸಂಚರಿಸುತ್ತಿದ್ದ ಕಾರಿನಲ್ಲಿ ಚಾಲಕ ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.














