ಬೆಳ್ತಂಗಡಿ, ಮೇ 18: ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಬಳಂಜ ಗ್ರಾಮದ ಬಳಂಜ ಫಾರ್ಮ್‌ನ ಮಾಲೀಕ ಅನಿಲ್ ಭಟ್ (45) ಅವರ ಪತ್ನಿ ಶೈಲಜಾ (35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಅನಿಲ್ ಭಟ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿಯ ಮಗ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ಅನಿಲ್ ಭಟ್ ಮತ್ತು ಪತ್ನಿ ಶೈಲಜಾ ಅವರು ತಮ್ಮ ಫಾರ್ಮ್‌ನ ಕೆಲಸ ಮುಗಿಸಿ ಬೈಕ್‌ನಲ್ಲಿ ಸೈಟ್‌ಗೆ ತೆರಳುತ್ತಿದ್ದ ವೇಳೆ ಕನ್ನಡಿಕಟ್ಟೆ ಸಮೀಪ ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!