ಮಂಗಳೂರು: ದುಲ್ಹಜ್ ಮಾಸದ ಪ್ರಥಮ ಚಂದ್ರದರ್ಶನವು ಮಂಗಳವಾರವಾಗುವ ಸಾಧ್ಯತೆ ಇರುವ ಹಿನ್ನೆಲೆ, ಮೇ 28ರಂದು ಈದುಲ್ ಅಝ್‌ಹಾ (ಬಕ್ರೀದ್) ಹಬ್ಬವನ್ನು ಆಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲಾ ಮುಸ್ಲಿಂ ಬಾಂಧವರು ಶರೀಯತ್ ನಿಯಮಾನುಸಾರ ಹಬ್ಬವನ್ನು ಆಚರಿಸುವಂತೆ ಕರೆ ನೀಡಿದ್ದಾರೆ.














