ಬಂಟ್ವಾಳ: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ನೀಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನಗಳ ಮಾಲೀಕರಿಗೆ ತಲಾ ₹25 ಸಾವಿರ ದಂಡ ವಿಧಿಸಿ ಬಂಟ್ವಾಳ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

ಬಂಟ್ವಾಳ ಸಂಚಾರ ಠಾಣಾ ವ್ಯಾಪ್ತಿಯ ಮೆಲ್ಕಾರ್‌ನಲ್ಲಿ ಏಪ್ರಿಲ್ 6ರಂದು KA-19-HT-9694 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನವನ್ನು ಅಪ್ರಾಪ್ತ ಬಾಲಕ ಚಲಾಯಿಸುತ್ತಿರುವುದು ವಾಹನ ತಪಾಸಣೆ ವೇಳೆ ಪೊಲೀಸರಿಗೆ ಪತ್ತೆಯಾಗಿತ್ತು. ಇದೇ ರೀತಿ ಏಪ್ರಿಲ್ 28ರಂದು ಬಿಸಿ ರೋಡ್ ಬಳಿ KA-05-KG-6785 ನೋಂದಣಿ ಸಂಖ್ಯೆಯ ಮತ್ತೊಂದು ದ್ವಿಚಕ್ರ ವಾಹನವನ್ನು ಅಪ್ರಾಪ್ತ ಬಾಲಕ ಚಲಾಯಿಸುತ್ತಿರುವುದು ಪತ್ತೆಯಾಯಿತು.

ಈ ಹಿನ್ನೆಲೆಯಲ್ಲಿ ಅಪ್ರಾಪ್ತರಿಗೆ ವಾಹನ ಚಾಲನೆಗೆ ಅವಕಾಶ ನೀಡಿದ ಆರೋಪದಲ್ಲಿ ಎರಡೂ ವಾಹನಗಳ ಮಾಲೀಕರ ವಿರುದ್ಧ ಬಂಟ್ವಾಳ ಸಂಚಾರ ಠಾಣೆ ಪೊಲೀಸರು ಭಾರತೀಯ ಮೋಟಾರು ವಾಹನ ಕಾಯ್ದೆ (IMV Act) ಕಲಂ 199(A) ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ಮೇ 18ರಂದು ನಡೆಸಿದ ಮಾನ್ಯ ನ್ಯಾಯಾಲಯವು ಎರಡೂ ವಾಹನಗಳ ಮಾಲೀಕರಿಗೆ ತಲಾ ₹25 ಸಾವಿರ ದಂಡ ವಿಧಿಸಿ ಆದೇಶಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!