ಬೆಳ್ತಂಗಡಿ: ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕ ದೇವಸ್ಥಾನದ ಸಮೀಪದ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮೃತರನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಹಾಗೂ ಉಜಿರೆಯ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ.
ಮೇ 19ರಂದು ಸಂಜೆ ಸುಮಾರು 4 ಗಂಟೆಗೆ ಶ್ರೀಪೂರ್ಣ ಸೇರಿದಂತೆ ಏಳು ಮಂದಿ ವಿದ್ಯಾರ್ಥಿಗಳ ತಂಡ ನೇತ್ರಾವತಿ ನದಿಗೆ ಈಜಲು ತೆರಳಿತ್ತು. ಈ ವೇಳೆ ಶ್ರೀಪೂರ್ಣ ನೀರಿನಲ್ಲಿ ಮುಳುಗಿದರೆಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಯುವಕನಿಗಾಗಿ ಶೋಧ ಕಾರ್ಯ ಆರಂಭಿಸಿದರು. ಬಳಿಕ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಆಗಮಿಸಿ ರಾತ್ರಿ ವೇಳೆಯಲ್ಲೂ ಕಾರ್ಯಾಚರಣೆ ಮುಂದುವರಿಸಿತು. ಸುಮಾರು ರಾತ್ರಿ 9.30ರ ವೇಳೆಗೆ ಮೃತದೇಹ ಪತ್ತೆಯಾಯಿತು.
ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ಸಮರ್ಥ ಆರ್. ಗಾಣಿಗೇರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!