ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರಗಳಲ್ಲಿ ಕಳೆದ ಎರಡು ದಿನಗಳಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬು ನಿವಾಸಿ ತಂಗಚ್ಚ @ ಮ್ಯಾಧ್ಯೂ @ ಬಶೀರ್ ಎಂಬಾತನ ಮೇಲೆ ಪೊಲೀಸರಿಗೆ ಶಂಕೆ ವ್ಯಕ್ತವಾಗಿದೆ.
ಈತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜಾಮೀನುರಹಿತ ದಸ್ತಗಿರಿ ವಾರಂಟ್ ಜಾರಿಯಾಗಲು ಬಾಕಿಯಿದ್ದು, ಆರೋಪಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಸಾರ್ವಜನಿಕರು ಸಮೀಪದ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮನವಿ ಮಾಡಿದ್ದಾರೆ.
ಮಾಹಿತಿ ನೀಡಲು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು:
ಉಪ್ಪಿನಂಗಡಿ ಪೊಲೀಸ್ ಠಾಣೆ: 08251-251055 / 9480805362
ಬೆಳ್ತಂಗಡಿ ಪೊಲೀಸ್ ಠಾಣೆ: 08256-232093 / 9480805370
ಪುತ್ತೂರು ಪೊಲೀಸ್ ಠಾಣಾ ಉಪನಿರೀಕ್ಷಕರು: 08251-230555 / 9480805361
ದಕ್ಷಿಣ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ: 9480805300 / 0824-2220500
ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳ ಬಗ್ಗೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ.














