ಪುತ್ತೂರು: ಪ್ರಗತಿ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್ ಹಾಗೂ ಎಸ್‌ಎನ್‌ಎ ಘಟಕದ ಸಹಯೋಗದಲ್ಲಿ ಅಂತರರಾಷ್ಟ್ರೀಯ ನರ್ಸಸ್ ದಿನಾಚರಣೆ–2026 ಅನ್ನು ಮೇ 16ರಂದು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.
“Our Nurses, Our Future: Empowered Nurses Save Lives” ಎಂಬ ವಿಷಯಾಧಾರಿತ ಕಾರ್ಯಕ್ರಮವು ಮಿಸ್ ಹವ್ಯಶ್ರೀ ಕೆ.ವಿ. ಮತ್ತು ತಂಡದವರ ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾಯಿತು. ಮಿಸ್ ಜಾಸ್ಮಿನ್ ಸ್ವಾಗತಿಸಿದರು. ಬಳಿಕ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಗತಿ ಆಸ್ಪತ್ರೆ ಶಿಕ್ಷಣ ಟ್ರಸ್ಟ್‌ನ ಟ್ರಸ್ಟಿ ಡಾ. ಸುಧಾ ಎಸ್. ರಾವ್, ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್, ತುಂಬೆಯ ಪ್ರಾಂಶುಪಾಲೆ ಡಾ. ರೀನಾ ವಿಲ್ಮಾ ಫ್ರಾಂಕ್, ಸರ್ಕಾರಿ ತಾಲೂಕು ಆಸ್ಪತ್ರೆ ಪುತ್ತೂರಿನ ನರ್ಸಿಂಗ್ ಅಧಿಕಾರಿ ಶ್ರೀಮತಿ ಸರೋಜಾ ಕೆ.ಎಂ. ಹಾಗೂ ಪ್ರಗತಿ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್‌ನ ಪ್ರಾಂಶುಪಾಲೆ ಪ್ರೊ. ಹೇಮಲತಾ ಜಿ. ಉಪಸ್ಥಿತರಿದ್ದರು.
ಪ್ರೊ. ಹೇಮಲತಾ ಜಿ. ಅವರು ನರ್ಸಸ್ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿಯಾಗಿದ್ದ ಡಾ. ರೀನಾ ವಿಲ್ಮಾ ಫ್ರಾಂಕ್ ಅವರು “Our Nurses, Our Future: Empowered Nurses Save Lives” ವಿಷಯದ ಕುರಿತು ಉಪನ್ಯಾಸ ನೀಡಿ, ಆರೋಗ್ಯ ಕ್ಷೇತ್ರದಲ್ಲಿ ನರ್ಸ್‌ಗಳ ಪಾತ್ರ ಮತ್ತು ಜವಾಬ್ದಾರಿಗಳ ಕುರಿತು ತಿಳಿಸಿದರು.
ಅಂತರರಾಷ್ಟ್ರೀಯ ನರ್ಸಸ್ ದಿನಾಚರಣೆಯ ಅಂಗವಾಗಿ ವಿವಿಧ ಸ್ಪರ್ಧೆಗಳು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಧ್ಯಕ್ಷೀಯ ಭಾಷಣದಲ್ಲಿ ಡಾ. ಸುಧಾ ಎಸ್. ರಾವ್ ಅವರು ಆರೋಗ್ಯ ಸೇವೆಯಲ್ಲಿ ಸಬಲ ನರ್ಸ್‌ಗಳ ಪಾತ್ರ ಅತ್ಯಂತ ಮಹತ್ವದ್ದೆಂದು ಹೇಳಿದರು.
ಮಿಸ್ ವಂದನಾ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ಮಿಸ್ ದೇವಿಕಾ ದೇವರಾಜ್ ನಿರೂಪಿಸಿದರು. ಇದೇ ವೇಳೆ ಪ್ರಥಮ ಸೆಮಿಸ್ಟರ್ ಬಿ.ಎಸ್‌ಸಿ. ನರ್ಸಿಂಗ್ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು  ನಿರೂಪಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!