ಕಡಬ: ಬಲ್ಯ ಪೇಟೆಯ ಅಂಗಡಿಯೊಂದರಲ್ಲಿ ಕಳ್ಳತನ ನಡೆದಿದ್ದು, ₹14 ಸಾವಿರ ನಗದು ದೋಚಿರುವ ಘಟನೆ ವರದಿಯಾಗಿದೆ.
ಬಲ್ಯ ನಿವಾಸಿ ಬೇಬಿ ಕೆ.ಇ (73) ಅವರು ನೀಡಿದ ದೂರಿನ ಪ್ರಕಾರ, ಅವರು ಬಲ್ಯ ಪೇಟೆಯಲ್ಲಿ ಅಂಗಡಿ ನಡೆಸುತ್ತಿದ್ದು, ಅಂಗಡಿಯ ಹಿಂಭಾಗದಲ್ಲೇ ಮನೆ ಇದೆ. ಮೇ 19ರಂದು ರಾತ್ರಿ ವ್ಯಾಪಾರ ಮುಗಿಸಿ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು.
ಮರುದಿನ ಮೇ 20ರಂದು ಬೆಳಿಗ್ಗೆ ಅಂಗಡಿ ತೆರೆಯಲು ಬಂದಾಗ ಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ. ಬಳಿಕ ಅಂಗಡಿಯೊಳಗೆ ಪರಿಶೀಲಿಸಿದಾಗ ಕ್ಯಾಶ್‌ಬಾಕ್ಸ್‌ನಲ್ಲಿದ್ದ ₹14 ಸಾವಿರ ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 62/2026 ದಾಖಲಿಸಿಕೊಂಡು, ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 331(3), 331(4) ಹಾಗೂ 305ರಡಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.














