ಬಂಟ್ವಾಳ: ಬಿ ಮೂಡ ಗ್ರಾಮದ ಕಂಚಿಕಾರ ಪೇಟೆ ಸಮೀಪ ನದಿಯಲ್ಲಿ ತೇಲುತ್ತಿದ್ದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಮೇ 21ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.
ಬಂಟ್ವಾಳ ಕಸಬಾ ನಿವಾಸಿ ಸಾಕೀರ್ (37) ಅವರಿಗೆ ಸ್ನೇಹಿತನೊಬ್ಬ ನದಿ ಬದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಬಳಿಕ ಸಾಕೀರ್ ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಸುಮಾರು 50-55 ವರ್ಷದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂ.16/2026 ದಾಖಲಿಸಿಕೊಂಡು, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) ಕಲಂ 194ರಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.
ಪೊಲೀಸರ ತನಿಖೆಯಲ್ಲಿ ಮೃತ ವ್ಯಕ್ತಿಯನ್ನು ಬಂಟ್ವಾಳ ಗೂಡಿನಬಳಿ ನಿವಾಸಿ ಇರ್ಫಾನ್ (39) ಎಂದು ಗುರುತಿಸಲಾಗಿದ್ದು, ಮೃತರ ತಂದೆ ಗುರುತು ದೃಢಪಡಿಸಿದ್ದಾರೆ.
ಇದರ ಮಧ್ಯೆ, ಇರ್ಫಾನ್ ಅವರ ಸಾವಿನ ಕುರಿತು ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ವೈದ್ಯಕೀಯ ವರದಿ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!