

ಆಂಧ್ರಪ್ರದೇಶ : ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಎಂಟು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ತೂರು ಜಿಲ್ಲೆಯ ಮೊಗಿಲಿ ಘಾಟ್ ಬಳಿಯ ಚಿತ್ತೂರು-ಬೆಂಗಳೂರು ಹೆದ್ದಾರಿಯಲ್ಲಿ ಇಂದು ನಡೆದಿದೆ.
ಅಪಘಾತದಲ್ಲಿ 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಂಧ್ರಪ್ರದೇಶ ರಾಜ್ಯ ಸರ್ಕಾರಿ ಬಸ್ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಬೆಂಗಳೂರು-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ಮೊಗಿಲಿ ಘಾಟ್‌ನಲ್ಲಿ ಎರಡು ಲಾರಿಗಳು ಮತ್ತು ಸರ್ಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮತ್ತು ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಸದ್ಯ ಅಪಘಾತಕ್ಕೆ ನಿಖರ ಕಾರಣವೇನು ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.