ಪುತ್ತೂರು: ಹೋರಿ ಹಾಯ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಹಿನ್ನೆಲೆ ವೈದ್ಯರ ನಿರ್ಲಕ್ಷ್ಯ ಆರೋಪದಡಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗೇರುಕಟ್ಟೆ ನಿವಾಸಿ ಮಹಮ್ಮದ್ ಶರೀಫ್ ಪಿ. (35) ಅವರಿಗೆ ಮೇ 14ರಂದು ಹೋರಿ ಹಾಯ್ದು ಗಾಯವಾಗಿದ್ದು, ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯ ಹದಗೆಟ್ಟ ಹಿನ್ನೆಲೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಮೇ 20ರಂದು ಅವರು ಮೃತಪಟ್ಟಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದಲೇ ಮೃತಪಟ್ಟಿದ್ದಾರೆ ಎಂದು ಮೃತರ ಸಹೋದರ ನಾಸಿರುದ್ದೀನ್ ಪಿ. ನೀಡಿದ ದೂರಿನಂತೆ ಪೊಲೀಸರು ತನಿಖೆ ಕೈಗೊಂಡಿದ್ದು, ವೈದ್ಯಕೀಯ ತಂಡದಿಂದ ವರದಿ ಕೋರಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!