ಪುತ್ತೂರು: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಉದ್ಯೋಗದಲ್ಲಿದ್ದ ಬೆಳ್ಳಾರೆ ನಿವಾಸಿ ಸೂರಜ್ ರೈ (27) ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ.
ಮೇ 15ರಂದು ರಾತ್ರಿ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಕುಣಿಗಲ್ ಸಮೀಪ ಕೋಳಿ ಸಾಗಾಟದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರಿಗೆ ತಲೆಗೆ ತೀವ್ರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಕುಣಿಗಲ್‌ನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 22ರಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರ ಪಾರ್ಥಿವ ಶರೀರವು ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಳ್ಳಾರೆಗೆ ತಲುಪಲಿದ್ದು, ಬಳಿಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸೂರಜ್ ರೈ ಅವರು ಪತ್ನಿ ಸ್ನೇಹ, ತಂದೆ ಯಕ್ಷಗುರು ವಾಸುದೇವ ರೈ ವಿ., ತಾಯಿ ಶರ್ಮಿಳಾ ರೈ ಹಾಗೂ ಸಹೋದರ ಸುದೀಪ್ ರೈ ಅವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!