ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣೆಯ 2015ರ ಮನೆ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ ಅಕ್ರ ಬಂಧಿತ ಆರೋಪಿ. ಉಪ್ಪಿನಂಗಡಿ ಠಾಣೆಯ ಅಪರಾಧ ಸಂಖ್ಯೆ 158/2015ರ ಕಲಂ 457 ಹಾಗೂ 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಮೇ 22ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯ ತನಿಖೆ-2 ಪಿಎಸ್‌ಐ ಕೌಶೀಕ್ ಬಿ.ಸಿ. ನೇತೃತ್ವದಲ್ಲಿ ಹೆಡ್ ಕಾನ್ಸ್‌ಟೇಬಲ್ ಶಿವರಾಮ್ ರೈ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಮಹದೇವ ಅವರ ತಂಡ ಮಂಗಳೂರಿನ ಪಣಂಬೂರಿನಲ್ಲಿ ಆರೋಪಿಯನ್ನು ಬಂಧಿಸಿದೆ.
ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆರೋಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!