ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು ನಗರ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಅಧ್ಯಕ್ಷರಾಗಿ ತಾಜುದ್ದೀನ್ ಸಾಲ್ಮರ, ಉಪಾಧ್ಯಕ್ಷರಾಗಿ ಶಮೀರ್ ನಾಜೂಕು, ಕಾರ್ಯದರ್ಶಿಯಾಗಿ ಇಫಾಝ್ ಬನ್ನೂರು, ಜೊತೆ ಕಾರ್ಯದರ್ಶಿಯಾಗಿ ಫವಾಝ್ ಬನ್ನೂರು ಹಾಗೂ ಕೋಶಾಧಿಕಾರಿಯಾಗಿ ಸಮೀರ್ ಡಿ.ಕೆ ಆಯ್ಕೆಯಾದರು.
ಸಮಿತಿ ಸದಸ್ಯರಾಗಿ ರಿಯಾಝ್ ಭೂಮಿ, ಅಶ್ರಫ್ ಗೋಳಿಕಟ್ಟೆ, ರಫೀಕ್ ಬಲ್ನಾಡ್ ಮತ್ತು ಅಲಿ ಸಾಲ್ಮರ ಆಯ್ಕೆಯಾಗಿದ್ದಾರೆ.
ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಹಾಗೂ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು ಚುನಾವಣಾ ಪ್ರಕ್ರಿಯೆ ನಡೆಸಿದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು, ಕಾರ್ಯದರ್ಶಿ ಉಸ್ಮಾನ್ ಎ.ಕೆ., ಇಸ್ಮಾಯಿಲ್ ಕೆಮ್ಮಾಯಿ ಹಾಗೂ ಜೊತೆ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

Join WhatsApp Group
error: Content is protected !!