ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಮಂಗಳೂರು ನಗರ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳುವಾದ ಬೈಕ್ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ದಿನಾಂಕ 18-05-2026ರಂದು ಮುಲ್ಕಿ ಜಂಕ್ಷನ್‌ನ ಅಪೋಲೊ ಫಾರ್ಮಾ ಸಮೀಪ ನಿಲ್ಲಿಸಿದ್ದ ಹೋಂಡಾ ಯುನಿಕಾರ್ನ್ ಬೈಕ್‌ (KA-20 EB-6383) ಕಳವು ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಮುಲ್ಕಿ ಠಾಣಾ ಪೊಲೀಸರು ಆರೋಪಿಗಳಾದ ಮೊಹಮ್ಮದ್ ರಾಝಿಕ್ (36), ಮುಕ್ಕ ಸುರತ್ಕಲ್ ನಿವಾಸಿ ಹಾಗೂ ಉಬೈದತ್ ಹೈದರ್ (31), ಬೈಕಂಪಾಡಿ ನಿವಾಸಿಯನ್ನು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು ₹20,000 ಮೌಲ್ಯದ ಕಳುವಾದ ಹೋಂಡಾ ಯುನಿಕಾರ್ನ್ ಬೈಕ್ ಹಾಗೂ ಸುಮಾರು ₹18,000 ಮೌಲ್ಯದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಮುಲ್ಕಿ ಠಾಣೆಯ ಪಿಎಸ್‌ಐ ಹಾಗೂ ಕ್ರೈಂ ತಂಡ ನಡೆಸಿದೆ.

ಪೊಲೀಸರ ಮಾಹಿತಿ ಪ್ರಕಾರ, ಬಂಧಿತ ಆರೋಪಿಗಳ ವಿರುದ್ಧ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್ ಹಾಗೂ ಇತರ ಅಪರಾಧ ಪ್ರಕರಣಗಳು ದಾಖಲಾಗಿವೆ.

Leave a Reply

Your email address will not be published. Required fields are marked *

Join WhatsApp Group
error: Content is protected !!