ವೇಣೂರು: ನಿಷೇಧಿತ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವೇಣೂರು ಪೊಲೀಸರು ಬಂಧಿಸಿ, ಮಾದಕವಸ್ತು ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರು ಮಂಗಳೂರು ಮಿಜಾರು ನಿವಾಸಿ ಮಹಮ್ಮದ್ ತಹ್ನವೀರ್ (27) ಮತ್ತು ಮೂಡಬಿದ್ರೆ ನಿವಾಸಿ ಮಹಮ್ಮದ್ ಸಲ್ವಾನ್ (22) ಎಂದು ಗುರುತಿಸಲಾಗಿದೆ.
ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಅಕ್ಷಯ್ ಡವಗಿರವರಿಗೆ ಮೇ 27ರಂದು ಮಧ್ಯಾಹ್ನ ವೇಳೆ MDMA ಸಾಗಾಟದ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಅದರ ಮೇರೆಗೆ ಠಾಣಾ ಸಿಬ್ಬಂದಿಗಳೊಂದಿಗೆ ಗುರುವಾಯನಕೆರೆ–ಮೂಡಬಿದ್ರೆ ರಸ್ತೆಯ ಕಂಬಳದಡ್ಡ ಪ್ರದೇಶದಲ್ಲಿ ದಾಳಿ ನಡೆಸಿದರು.
ಈ ವೇಳೆ KA 13 P 2905 ಸಂಖ್ಯೆಯ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಅಂದಾಜು ₹39,200 ಮೌಲ್ಯದ 3.92 ಗ್ರಾಂ ತೂಕದ MDMA ಮಾದಕವಸ್ತುವನ್ನು ಪತ್ತೆಹಚ್ಚಿದರು. ಆರೋಪಿಗಳನ್ನು ವಶಕ್ಕೆ ಪಡೆದು, ಮಾದಕವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ಜಪ್ತಿ ಮಾಡಲಾಗಿದೆ.
ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 41/2026ರಂತೆ NDPS ಕಾಯ್ದೆಯ ಕಲಂ 8(c) ಮತ್ತು 22(b) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.













