ಬಂಟ್ವಾಳ: ಅಕ್ರಮವಾಗಿ ಜಾನುವಾರು ವಧೆ ನಡೆಸುತ್ತಿದ್ದ ಇಬ್ಬರನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ, ಜಾನುವಾರುಗಳು, ಮಾಂಸ, ಕಾರು ಹಾಗೂ ಕೃತ್ಯಕ್ಕೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರು ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್ ಸಾದೀಕ್ (30) ಎಂದು ಗುರುತಿಸಲಾಗಿದೆ.

ಮೇ 27ರಂದು ರಾತ್ರಿ ವೇಳೆ ಅಕ್ರಮ ಜಾನುವಾರು ವಧೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿರವರು ಸಿಬ್ಬಂದಿಗಳೊಂದಿಗೆ ಸಜಿಪಮೂಡ ಗ್ರಾಮದ ಪಂಜಾಜೆ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಈ ವೇಳೆ ಮನೆಯೊಂದರ ಹಿಂಭಾಗದ ಕೊಟ್ಟಿಗೆಯಲ್ಲಿ ಮಾಂಸ ಕತ್ತರಿಸುತ್ತಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದರು. ವಿಚಾರಣೆಯಲ್ಲಿ ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರು ವಧೆ ನಡೆಸುತ್ತಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ಒಂದು ಜಾನುವಾರನ್ನು ವಧೆ ಮಾಡಿ ಕತ್ತರಿಸಲಾದ ಮಾಂಸ, 06 ಜಾನುವಾರುಗಳು, ಒಂದು ಕಾರು ಹಾಗೂ ಕೃತ್ಯಕ್ಕೆ ಬಳಸಿದ ವಿವಿಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 68/2026ರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 4, 7 ಮತ್ತು 12 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!