ವಿಟ್ಲ, ಜೂನ್ 1: ಪುಣಚ ಗ್ರಾಮದ ಪೆರಿಯಾಲ್ತಡ್ಕದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕ ಜೂಜಾಟದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯ ಉಪ ನಿರೀಕ್ಷಕ ರಾಮಕೃಷ್ಣ ಅವರಿಗೆ ದೊರೆತ ಮಾಹಿತಿಯ ಮೇರೆಗೆ ಮೇ 30ರ ರಾತ್ರಿ ಠಾಣಾ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡುತ್ತಿರುವುದು ಪತ್ತೆಯಾಗಿದೆ.
ಈ ವೇಳೆ ಪುಣಚ ನಿವಾಸಿಗಳಾದ ದಿವಾಕರ ಪೂಜಾರಿ (46) ಹಾಗೂ ಯಶ್ವಂತ್ (34) ಅವರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಿಂದ 4 ಅಂಕದ ಕೋಳಿಗಳು, ₹4,145 ನಗದು, ಕೋಳಿ ಅಂಕಕ್ಕೆ ಬಳಸಿದ ಕತ್ತಿ (ಬಾಳು) ಸೇರಿದಂತೆ ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!