ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಸಾಜದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ದಾಖಲಾತಿ ಆಂದೋಲನದ ಅಂಗವಾಗಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಹೂ ನೀಡಿ ಸ್ವಾಗತಿಸಲಾಯಿತು. ಬಳಿಕ ಶಾಲೆಯ ಮುಖ್ಯದ್ವಾರದಿಂದ ಬ್ಯಾಂಡ್ ವಾದ್ಯದೊಂದಿಗೆ ದಾಖಲಾತಿ ಜಾಗೃತಿ ಮೆರವಣಿಗೆ ನಡೆಯಿತು.
ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆಯೊಂದಿಗೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸುಧಾಕರ ನಾಯಕ್ ಹಸಂತಡ್ಕ ವಹಿಸಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು.
ಮುಖ್ಯೋಪಾಧ್ಯಾಯ ಶಶಿಕಾಂತ ಸಿ. ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಆಕರ್ಷಿಸುವ ಉದ್ದೇಶದಿಂದ ಆಂಗ್ಲ ಭಾಷಾ ಮಾಧ್ಯಮದ ದ್ವಿಭಾಷಾ ಕಲಿಕಾ ಕ್ರಮವನ್ನು ಇಲಾಖೆ ಪರಿಚಯಿಸುತ್ತಿರುವ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಜೊತೆಗೆ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಬಲ್ನಾಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪರಮೇಶ್ವರಿ ಭಟ್ ಬಿ., ಎಸ್‌ಡಿಎಂಸಿ ಉಪಾಧ್ಯಕ್ಷೆ ವಿಮಲಾ ಕೆ., ಸದಸ್ಯರಾದ ಕೃಷ್ಣ ಕೆ., ಶೋಭಾ ಎಂ., ಟೌನ್ ಬ್ಯಾಂಕ್ ನಿರ್ದೇಶಕ ಕಿರಣ್ ರೈ ಬಲ್ನಾಡು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಿಕ್ಷಕಿ ಸುವರ್ಣಲತಾ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಕವಿತಾ ಎಚ್.ಎಲ್. ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಸಿಹಿಯೂಟ ವ್ಯವಸ್ಥೆ ಮಾಡಲಾಯಿತು.

Leave a Reply

Your email address will not be published. Required fields are marked *

Join WhatsApp Group
error: Content is protected !!