ಕರ್ನಾಟಕದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಡಿ.ಕೆ. ಶಿವಕುಮಾರ್ ಅವರು ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದು, ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಆಶೀರ್ವಾದ ಪಡೆದರು.

ಇಂದು ಸಂಜೆ ನಡೆಯಲಿರುವ ತಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕೆ ಬರುವಂತೆ ಅತ್ಯಂತ ಗೌರವಪೂರ್ವಕವಾಗಿ ಆಹ್ವಾನಿಸಿದರು.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.

ಸಿದ್ದರಾಮಯ್ಯ ನಿವಾಸ ‘ಕಾವೇರಿ’ಗೆ ಭೇಟಿ

ಇಂದು ಬೆಳಗ್ಗೆ ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಗೆ ತೆರಳಿದರು. ಸಿದ್ದರಾಮಯ್ಯ ಅವರಿಗೆ ಆತ್ಮೀಯವಾಗಿ ಆಹ್ವಾನ ಪತ್ರಿಕೆ ನೀಡಿದ ಡಿಕೆಶಿ, ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಿದರು.

ಯಡಿಯೂರಪ್ಪ ನಿವಾಸಕ್ಕೂ ಭೇಟಿ ನೀಡಿ ಆಹ್ವಾನ

ಸಿದ್ದರಾಮಯ್ಯ ಅವರ ಭೇಟಿಯ ನಂತರ ಡಿ.ಕೆ. ಶಿವಕುಮಾರ್ ಮತ್ತು ಡಾ. ಜಿ. ಪರಮೇಶ್ವರ್ ಅವರು ನೇರವಾಗಿ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಧಾವಿಸಿದರು. ಯಡಿಯೂರಪ್ಪ ಅವರಿಗೆ ಆಮಂತ್ರಣ ಪತ್ರಿಕೆ ಹಸ್ತಾಂತರಿಸಿದ ನಾಯಕರು, ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವದಿಸುವಂತೆ ಆತ್ಮೀಯವಾಗಿ ಆಹ್ವಾನಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!