ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ಸಚಿವ ಸಂಪುಟ ಸೇರಲಿರುವ ನೂತನ ಸಚಿವರ ಮೊದಲ ಅಧಿಕೃತ ಪಟ್ಟಿ ಪ್ರಕಟಗೊಂಡಿದೆ.
ಕಾಂಗ್ರೆಸ್ ಹೈಕಮಾಂಡ್ ಸುದೀರ್ಘ ಚರ್ಚೆಯ ಬಳಿಕ ಅಂತಿಮಗೊಳಿಸಿರುವ ಈ ಪಟ್ಟಿಯಲ್ಲಿ ಹಿರಿಯ ಮತ್ತು ಅನುಭವಿ ನಾಯಕರಿಗೆ ಮೊದಲ ಆದ್ಯತೆ ನೀಡಲಾಗಿದೆ.ಸಿದ್ದರಾಮಯ್ಯ ಸಂಪುಟದಲ್ಲಿದ್ದ ಬಹುತೇಕ ಹಿರಿಯ ಸಚಿವರಿಗೆ ಡಿ.ಕೆ.ಶಿವಕುಮಾರ್ ಮಂತ್ರಿ ಮಂಡಲದಲ್ಲಿಯೂ ಸ್ಥಾನ ನೀಡಲಾಗಿದೆ. ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಕರೆ ಮಾಡಿ ಸಂಜೆ ಪ್ರಮಾಣವಚನ ಸ್ವೀಕಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. 13 ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ನೂತನ ಸಚಿವರ ಅಧಿಕೃತ ಪಟ್ಟಿ ಇಲ್ಲಿದೆ:
ಡಾ.ಜಿ.ಪರಮೇಶ್ವರ್
ಕೆ.ಹೆಚ್.ಮುನಿಯಪ್ಪ
ಕೆ.ಜೆ.ಜಾರ್ಜ್
ಕೃಷ್ಣಬೈರೇಗೌಡ
ಯತೀಂದ್ರ ಸಿದ್ದರಾಮ್ಯ
ಎಂ.ಬಿ.ಪಾಟೀಲ್
ಪ್ರಿಯಾಂಕ್ ಖರ್ಗೆ
ರಾಮಲಿಂಗಾರೆಡ್ಡಿ
ದಿನೇಶ್ ಗುಂಡೂರಾವ್
ಭೈರತಿ ಸುರೇಶ್
ಹೆಚ್.ಕೆ.ಪಾಟೀಲ್ ಅಥವಾ ಈಶ್ವರ್ ಖಂಡ್ರೆ
ಶರಣಪ್ರಕಾಶ್ ಪಾಟೀಲ್
ಸತೀಶ್ ಜಾರಕಿಹೊಳಿ
ಯು.ಟಿ.ಖಾದರ್






