ಪುತ್ತೂರು: ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯಲ್ಲಿ 99ನೇ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಶಾಲಾ ಸಂಚಾಲಕಿ ವಂದನೀಯ ಭಗಿನಿ ಪ್ರಶಾಂತಿ ಬಿ.ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
2026–27ನೇ ಶೈಕ್ಷಣಿಕ ವರ್ಷಕ್ಕೆ ದಾಖಲಾದ ನೂತನ ವಿದ್ಯಾರ್ಥಿಗಳನ್ನು ಹೂ ನೀಡಿ ಸ್ವಾಗತಿಸಲಾಯಿತು. ಬಳಿಕ ವಾದ್ಯಘೋಷದೊಂದಿಗೆ ವಿದ್ಯಾರ್ಥಿಗಳನ್ನು ಸಭಾಂಗಣಕ್ಕೆ ಕರೆತರಲಾಯಿತು. ನೂತನ ಶೈಕ್ಷಣಿಕ ವರ್ಷದ ಪಠ್ಯಪುಸ್ತಕಗಳನ್ನೂ ಇದೇ ಸಂದರ್ಭದಲ್ಲಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ವಿನಯ ಸುವರ್ಣ, ನಿಕಟಪೂರ್ವ ಉಪಾಧ್ಯಕ್ಷ ರಾಮಚಂದ್ರ ಭಟ್, ಹಿರಿಯ ವಿದ್ಯಾರ್ಥಿಗಳಾದ ಹಮೀದ್ ಕೂರ್ನಡ್ಕ ಹಾಗೂ ಅಶ್ರಫ್ ಮುಕ್ವೆ, ರಕ್ಷಕ-ಶಿಕ್ಷಕ ಸಂಘದ ಸದಸ್ಯರಾದ ಜನಾರ್ಧನ ಪೂಜಾರಿ ಮತ್ತು ರೇಣುಕಾ ಚಂದ್ರಶೇಖರ್ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಐರಿನ್ ವೇಗಸ್ ಸ್ವಾಗತಿಸಿದರು. ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ವಂದಿಸಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!