ನವದೆಹಲಿ: ಬಿಜೆಪಿಗೆ ಕೆ ಅಣ್ಣಾಮಲೈ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅಂಗೀಕರಿಸಿದ್ದಾರೆ. ಕೆ. ಅಣ್ಣಾಮಲೈ ಅವರ ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆಗಿನ ಸಂಬಂಧ ಶುಕ್ರವಾರ ಕೊನೆಗೊಂಡಿದೆ.

ಬಿಜೆಪಿಯ ತಮಿಳುನಾಡು ಘಟಕದ ಮುಖ್ಯಸ್ಥ ಅಣ್ಣಾಮಲೈ ಅವರು ಮಧ್ಯಾಹ್ನ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ತಮ್ಮ ಭವಿಷ್ಯದ ಯೋಜನೆಗಳನ್ನು ಪ್ರಕಟಿಸಲಿದ್ದಾರೆ. ತಮಿಳುನಾಡು ರಾಜಕಾರಣದಲ್ಲಿ ಹಲವು ದಿನಗಳಿಂದ ಹರಿದಾಡುತ್ತಿದ್ದ ತೀವ್ರ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದ್ದು, ಹಿರಿಯ ನಾಯಕ ಹಾಗೂ ತಮಿಳುನಾಡು ತಮಿಳುನಾಡು ಬಿಜೆಪಿ ಘಟಕದ ಮುಖ್ಯಸ್ಥ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದ (BJP) ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಅಣ್ಣಾಮಲೈ ಅವರ ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅವರ ಈ ದಿಢೀರ್ ನಿರ್ಧಾರವು ದಕ್ಷಿಣ ಭಾರತದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!