ಪುತ್ತೂರು, ಜೂ. 5: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಆಯ್ಕೆ ಪ್ರಕ್ರಿಯೆ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ನಾಯಕ್ ಗುಣಿಕಾ ಗುರುಪ್ರಸಾದ್, ಕಾರ್ಯದರ್ಶಿಯಾಗಿ ಲಯ ತೇಜ ಎ. ಹಾಗೂ ಜೊತೆ ಕಾರ್ಯದರ್ಶಿಯಾಗಿ ಸಂದೇಶ್ ಗೌಡ ಎಸ್.ಕೆ. ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೆವ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ್ ಪ್ರಕಾಶ್ ಸಿ.ಎಚ್., ಕವಿತಾ ಹಾಗೂ ಫಿಲೋಮಿನಾ ಮೋಂತೆರೋ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.






