ಬೆಳ್ತಂಗಡಿ, ಜೂ. 5: ಇಲ್ಲಿನ ಗುರುವಾಯನಕೆರೆಯ ಖಾಸಗಿ ಕಾಲೇಜೊಂದರ ಹಾಸ್ಟೆಲ್‌ನಲ್ಲಿ ವಾಸವಿದ್ದ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂನ್ 4ರಂದು ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ಅಫ್ರಿನ್ ತಾಜ್ (17) ಎಂದು ಗುರುತಿಸಲಾಗಿದೆ. ಆಕೆ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಹಾಸ್ಟೆಲ್‌ನಲ್ಲಿ ವಾಸವಿದ್ದಳು ಎಂದು ತಿಳಿದುಬಂದಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ವಿದ್ಯಾರ್ಥಿನಿ ಮಧ್ಯಾಹ್ನ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವಿಷಯ ತಿಳಿದ ಕೂಡಲೇ ಕಾಲೇಜು ಆಡಳಿತ ಮಂಡಳಿ ಪೋಷಕರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಆಗಮಿಸಿದ್ದಾರೆ.
ಈ ಸಂಬಂಧ ಮೃತಳ ಪೋಷಕರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 33/2026 ಹಾಗೂ ಬಿಎನ್‌ಎಸ್‌ಎಸ್ ಕಲಂ 194 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!