
ಪುತ್ತೂರು, ಜೂ. 7: ಪುತ್ತೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉಂಟಾಗಬಹುದಾದ ಪ್ರಾಕೃತಿಕ ವಿಕೋಪ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಪುತ್ತಿಲ ಪರಿವಾರ ಸನ್ನದ್ಧವಾಗಿದ್ದು, ಸಂಕಷ್ಟಕ್ಕೆ ಸಿಲುಕಿರುವ ನಾಗರಿಕರ ನೆರವಿಗೆ ಸದಾ ಸಿದ್ಧವಾಗಿರುವುದಾಗಿ ಪುತ್ತಿಲ ಪರಿವಾರ ತಿಳಿಸಿದೆ.
ತಾಲೂಕಿನ ವಿವಿಧ ಭಾಗಗಳಲ್ಲಿ ತುರ್ತು ಸೇವೆಗಾಗಿ ಮೂರು ಆಂಬ್ಯುಲೆನ್ಸ್‌ಗಳನ್ನು ಸಜ್ಜುಗೊಳಿಸಲಾಗಿದ್ದು, ಅಗತ್ಯವಿರುವವರು 7760787464 ಹಾಗೂ 9741279680 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ಮಾಹಿತಿ ನೀಡಲಾಗಿದೆ.
ಇದಲ್ಲದೆ, ಮಳೆ ಸಂಬಂಧಿತ ಸಮಸ್ಯೆಗಳಿಗೆ ಯಾವುದೇ ಅಧಿಕಾರಿಗಳು ಸ್ಪಂದಿಸದಿದ್ದಲ್ಲಿ, ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು 9980266678 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಅರುಣ್ ಕುಮಾರ್ ಪುತ್ತಿಲ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






